ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು

78ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನಾವರಣ!
ರಾಜ್ಯ

78ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನಾವರಣ!

ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗ್ಯಾರಂಟಿ ಘೋಷಣೆ ಜಾರಿ ವಿಳಂಬ, ಮತಾಂತರ ನಿಷೇಧ ಕಾಯ್ದೆ ಹಿಂತೆಗೆತಕ್ಕೆ ನಿರ್ಧಾರ: ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ

ಗ್ಯಾರಂಟಿ ಘೋಷಣೆ ಜಾರಿ ವಿಳಂಬ, ಮತಾಂತರ ನಿಷೇಧ ಕಾಯ್ದೆ ಹಿಂತೆಗೆತಕ್ಕೆ ನಿರ್ಧಾರ: ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಐದು ಗ್ಯಾರಂಟಿ ಘೋಷಣೆ ವಿಳಂಬ ವಿರೋಧಿಸಿ, 5 ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನ ವಾಪಾಸ್ ಪಡೆಯುತ್ತಿರುವ ಬಗ್ಗೆ ವಿರೋಧಿಸಿ ಇಂದು ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. 

'ಗ್ಯಾರಂಟಿ' ಕದನ: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ಗದ್ದಲ; ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ
ರಾಜ್ಯ

'ಗ್ಯಾರಂಟಿ' ಕದನ: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ಗದ್ದಲ; ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ

ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. 

ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ನೀಡಲಾಗುತ್ತದೆ: ನಿನ್ನೆಯ ಹೇಳಿಕೆಗೆ ಆಹಾರ ಖಾತೆ ಸಚಿವ ಬದ್ಧ!
ರಾಜ್ಯ

ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ನೀಡಲಾಗುತ್ತದೆ: ನಿನ್ನೆಯ ಹೇಳಿಕೆಗೆ ಆಹಾರ ಖಾತೆ ಸಚಿವ ಬದ್ಧ!

ಅನ್ನ ಭಾಗ್ಯ ಯೋಜನೆಯಡಿ ಮೊದಲಿನಂತೆ ಇರುವ 5 ಕೆಜಿ ಅಕ್ಕಿಯನ್ನು ಕಡ್ಡಾಯವಾಗಿ ನೀಡುತ್ತೇವೆ. ಹೊಸದಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವಂತೆ ಒಬ್ಬ ವ್ಯಕ್ತಿಗೆ 5 ಕೆಜಿಯಂತೆ 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗಳಿಗೆ ಇಂದು ಜುಲೈ 1ರಿಂದ ಹಾಕಲಾಗುತ್ತದೆ ಎಂದು ಆಹಾರ ಖಾತೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗೆ ನಾನು ಗ್ಯಾರಂಟಿ, ಅಕಸ್ಮಾತ್ ಜಾರಿ ಮಾಡದೆ ಹೋದ್ರೆ ರಾಜಕೀಯ ನಿವೃತ್ತಿ ಪಡೀತೀನಿ: ಶಾಸಕ ಕೋನರೆಡ್ಡಿ
ರಾಜಕೀಯ

ಕಾಂಗ್ರೆಸ್ ಗ್ಯಾರಂಟಿಗೆ ನಾನು ಗ್ಯಾರಂಟಿ, ಅಕಸ್ಮಾತ್ ಜಾರಿ ಮಾಡದೆ ಹೋದ್ರೆ ರಾಜಕೀಯ ನಿವೃತ್ತಿ ಪಡೀತೀನಿ: ಶಾಸಕ ಕೋನರೆಡ್ಡಿ

ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳು ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ, ಮೊದಲ ಸಂಪುಟ ಸಭೆಯಲ್ಲಿಯೇ ಅನುಮೋದನೆ ಪಡೆಯುತ್ತೇವೆ ಎಂದವರು ಹಲವು ದಿನಗಳು ಕಳೆದರೂ ಇನ್ನೂ ಜಾರಿಗೆ ತಂದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಸಾರ್ವಜನಿಕರು ಟೀಕಿಸುತ್ತಿದ್ದಾರೆ.