ದೇಶಮೊದಲು 'ಕಾಂಗ್ರೆಸ್ ಜೋಡೋ ಯಾತ್ರೆ' ಮಾಡಿ: ಕಾಂಗ್ರೆಸ್ ಕಾಲೆಳೆದ ಎಎಪಿ
ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಆಮ್ ಆದ್ಮಿ ಪಕ್ಷ(ಎಎಪಿ) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ತನ್ನ 'ಭಾರತ್ ಜೋಡೋ ಯಾತ್ರೆ'ಯನ್ನು ಮುಂದುವರಿಸುವ ಬದಲು ಮೊದಲು 'ಕಾಂಗ್ರೆಸ್ ಜೋಡೋ ಯಾತ್ರೆ' ನಡೆಸಲಿ ಎಂದು ಹೇಳಿದೆ.