ದೇಶರಾಹುಲ್ ಗಾಂಧಿ ಮೇಲ್ಮನವಿ: ಸೂರತ್ಗೆ ಕಾಂಗ್ರೆಸ್ ನಾಯಕರ ದಂಡು, ರಿಜಿಜು ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ತೆರಳುತ್ತಿರುವುದನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.