ರಾಜಕೀಯಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರಿಗೆ ಆಮಿಷ; ಕಾಂಗ್ರೆಸ್ ನಿಂದ ಕುಕ್ಕರ್ ವಿತರಣೆ: HD ಕುಮಾರಸ್ವಾಮಿ ಆರೋಪ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಕಾಂಗ್ರೆಸ್ ನಿಂದ ಕುಕ್ಕರ್ ಆಮಿಷವೊಡ್ಡಲಾಗುತ್ತಿದೆ ಎಂದು ಮಂಗಳವಾರ ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಕ್ಷೇತ್ರದಲ್ಲಿ ನ್ಯಾಯಯುತ ಮತದಾನಕ್ಕಾಗಿ ಅರಸೇನಾ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ.