ದೇಶಮಧ್ಯ ಪ್ರದೇಶ: ಸಂವಿಧಾನ ಉಳಿಸಲು ಮೋದಿ ಹತ್ಯೆಗೆ ಕರೆ; ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ ಐಆರ್, ಸರ್ಕಾರ ಆದೇಶ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ಸಜ್ಜಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.