ದೇಶರಾಜ್ಯಸಭೆ ಚುನಾವಣೆ: ಗುಜರಾತ್ ಕಾಂಗ್ರೆಸ್ ಶಾಸಕರು ರಾಜಸ್ಥಾನದ ರೆಸಾರ್ಟ್ ಗೆ ಶಿಫ್ಟ್
ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತಿನ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್, ಮುಂದೆ ಸಂಭಾವ್ಯ ರಾಜೀನಾಮೆಯನ್ನು ತಪ್ಪಿಸುವ ಉದ್ದೇಶದಿಂದ ಉಳಿದ ಶಾಸಕರನ್ನು ನೆರೆ ರಾಜ್ಯ ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರಸ್ತೆಯಲ್ಲಿರುವ ರೆಸಾರ್ಟ್ ಗೆ ಶಿಫ್ಟ್ ಮಾಡಲು ಸೋಮವಾರ ನಿರ್ಧರಿಸಿದೆ.