ರಾಜ್ಯಜಾತಿ ಗಣತಿ ಕುರಿತ ಕಾಂತರಾಜು ಸಮಿತಿ ವರದಿ ಮಂಡನೆ: ಕೆಎಸ್ ಈಶ್ವರಪ್ಪ
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಈ ಹಿಂದಿನ ಆಯೋಗದ ಅಧ್ಯಕ್ಷ ಕಾಂತರಾಜು ಅವರು ನೇತೃತ್ವದ ಸಮಿತಿಯ ವರದಿಯನ್ನು ವಿಧಾನಮಂಡಲದಲ್ಲಿ ಮಂಡನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.