ರಾಜ್ಯಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆ; ಜನವರಿಯಲ್ಲಿ ಮುಖ್ಯಮಂತ್ರಿಯವರಿಂದ ಕೇಂದ್ರ ಸಚಿವರ ಭೇಟಿ
ಕುರಿ ಕಾಯುವ ವೃತ್ತಿಯಲ್ಲಿರುವ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಹೇಳಿದರು.