ದೇಶಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವು
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.