ರಾಜ್ಯಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಕಾರು, ಮೂವರು ಸಾವು: ಧರ್ಮಸ್ಥಳಕ್ಕೆ ಹೊರಟ ಬಸ್ ಅಪಘಾತ: ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಶಾಲಾ ಕಾಂಪೌಂಡ್ ಹಾಗೂ ಮನೆಗೆ ಬಸ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ. ಉದಯಪುರ ಗ್ರಾಮದ ಅಮೃತ್ರಾಜ್ (34) ಮೃತ ದುರ್ದೈವಿ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.