ರಾಜ್ಯತುಂಬಿ ಹರಿಯುತ್ತಿರುವ ಹೊಳೆಗೆ ಅಲುಗಾಡುವ ಕಾಲುಸಂಕ: ಪತ್ತೆಯಾಗದ ಸನ್ನಿಧಿ, ಸರ್ಕಾರದ ವಿರುದ್ಧ ಆಕ್ರೋಶ
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಬೀಜಮಕ್ಕಿ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ಕಾಲುಸಂಕಕ್ಕೆ ಸರ್ಕಾರ ಹಣ ಮಂಜೂರು ಮಾಡಿದಾಗ ಜನರ ಸಂತೋಷಕ್ಕೆ ಪಾರವೇ ಇರಲಿಲ್ಲ. ಆದರೆ, ಇದುವರೆಗೂ ಸೇತುವೆ ಕಾಮಗಾರಿ ಆರಂಭವಾಗಿಲ್ಲ. ಈ ಮೂಲಕ ಸರ್ಕಾರಿ ಅಧಿಕಾರಿಗಳ ನಿರಾಸಕ್ತಿ ಬಯಲಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.