ಕಾವೇರಿ ಜಲ ವಿವಾದ

ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಇಂದು ದೆಹಲಿಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಮಳೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಲಿವೆ.

ಕರ್ನಾಟಕ 1 ಲಕ್ಷ ಕೋಟಿ ರೂ ಪರಿಹಾರ ನೀಡಬೇಕು: ತಮಿಳುನಾಡು ರೈತ ಮುಖಂಡ ಆಗ್ರಹ
ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ. ಇದರಿಂದ ತಮಿಳುನಾಡು ಸರ್ಕಾರ ತನ್ನ ರೈತರಿಗೆ ಅಗತ್ಯ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕಾವೇರಿ ವಿವಾದ: ಆದೇಶ 'ನಮ್ಮ ಹಿತಾಸಕ್ತಿಗೆ ವಿರುದ್ಧ'; ನೀರು ಹರಿಸುವ ಪ್ರಮಾಣ ಅರ್ಧಕ್ಕೆ ಇಳಿಸುವಂತೆ CWMAಗೆ ಕರ್ನಾಟಕ ಮನವಿ
ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಮಂಗಳವಾರ CWMAಗೆ ತುರ್ತು ಮನವಿ ಸಲ್ಲಿಸಿ, ಆಗಸ್ಟ್ 11ರಂದು ನಡೆದ ಪ್ರಾಧಿಕಾರದ 55ನೇ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ತಕ್ಷಣ ಮರುಪರಿಶೀಲಿಸುವಂತೆ ಕೋರಿದ್ದಾರೆ.

ಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!
ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕದೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮುಂದಿಟ್ಟ ಕೆಲವೇ ದಿನಗಳಲ್ಲಿ ಈ ಹೇಳಿಕೆಗಳು ಹೊರಬಂದಿದೆ.

ತಮಿಳುನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ; ಸಿಎಂ ವಿಜಯ್ ಭೇಟಿ ಮುಂದೂಡಿಕೆ: CM ಡಿ.ಕೆ ಶಿವಕುಮಾರ್; Video
ಕಾವೇರಿ ಜಲ ವಿವಾದ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 2ರಂದು (ಭಾನುವಾರ) ಬೆಂಗಳೂರಿನ ತಮ್ಮ ಅಧಿಕೃತ ನಿವಾಸ'ಕೃಷ್ಣಾ'ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ
ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು (ಒಟ್ಟು ಸುಮಾರು 4 ಟಿಎಂಸಿ) ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ: CWRC ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಕೋಲಾರ ಸೇರಿದಂತೆ ಕಾವೇರಿ ಜಲವನ್ನು ನಂಬಿಕೊಂಡಿರುವ ರೈತರ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ.

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ; Video
ಈ ನಡುವೆ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನವನ್ನು ಖಂಡಿಸಿ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆಗಳು ನಡೆದವು.

ಕಾವೇರಿ ಜಲ ವಿವಾದ: ಸಿಎಂ ಡಿ.ಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ನಡುವೆ ಆಗಸ್ಟ್ 3ಕ್ಕೆ ಬೆಂಗಳೂರಿನಲ್ಲಿ ಸಭೆ ನಿಗದಿ?
ಮೂಲಗಳ ಪ್ರಕಾರ, ತಮಿಳುನಾಡು ಸರ್ಕಾರದಿಂದ ಸಭೆಗೆ ಮನವಿ ಬಂದಿದ್ದು, ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಗಸ್ಟ್ 3ರಂದು ಬೆಂಗಳೂರಿನಲ್ಲಿ ಮಾತುಕತೆ ನಡೆಸಲು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

