ಕಿಮ್ಸ್

GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!
ಕಿಮ್ಸ್‌ನ ಪ್ರಾಧ್ಯಾಪಕ ಡಾ. ಸುನೀಲ್ ಜಿ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಡಾ. ಅಬ್ಬಯ್ಯ ಅವರನ್ನು ಶಾಶ್ವತವಾಗಿ ನೇಮಿಸುವುದು ಮತ್ತು ಅರ್ಜಿದಾರರನ್ನು ಅವರ ಕೆಳಗೆ ನಿಯೋಜಿಸುವುದು ಬದ್ಧತೆಯ ಶಾಸನಬದ್ಧ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ನವಜಾತ ಶಿಶು ಹೊಟ್ಟೆಯಲ್ಲಿ ಭ್ರೂಣ ಪತ್ತೆ: ಹುಬ್ಬಳ್ಳಿ ಕಿಮ್ಸ್‌ನಲ್ಲಿ ಅಚ್ಚರಿಯ ಘಟನೆ...!
ಕಳೆದ ಸೆಪ್ಟಂಬರ್ 23ರಂದು ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ನವಜಾತ ಶಿಶುವಿಗೆ ಆಲ್ಟ್ರಾಸೌಂಡ್ ಮಾಡಿಸಲಾಗಿದೆ.

ಹುಬ್ಬಳ್ಳಿ ಕಿಮ್ಸ್ ನಲ್ಲಿ ಹೆಣ್ಣು ಶಿಶು ಅಪಹರಣ ಪ್ರಕರಣ: ಹೆತ್ತ ತಾಯಿಯನ್ನೇ ಬಂಧಿಸಿದ ಪೊಲೀಸರು!
40 ದಿನದ ಹೆಣ್ಣು ಶಿಶು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರವೆಂದರೆ, ಈ ಪ್ರಕರಣದಲ್ಲಿ ಹೆತ್ತ ತಾಯಿಯೇ ಪ್ರಮುಖ ಆರೋಪಿಯಾಗಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಿಶುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳ್ಳಿ: ಬ್ಲ್ಯಾಕ್ ಫಂಗಸ್ ನಿಂದಾಗಿ ಕಿಮ್ಸ್ ನ 15 ಕೋವಿಡ್ ರೋಗಿಗಳಿಗೆ ಅಂಧತ್ವ
ಕಳೆದ ಎರಡು ತಿಂಗಳಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂಧ್ರ) ನಿಂದಾಗಿ 15 ಜನರು ದೃಷ್ಟಿ ಕಳೆದುಕೊಂಡಿದ್ದಾರೆ.

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಆತ್ಮಹತ್ಯೆ
ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.

ಬ್ಲ್ಯಾಕ್ ಫಂಗಸ್: ಹುಬ್ಬಳ್ಳಿ ಕಿಮ್ಸ್'ನಲ್ಲಿ 90 ಮಂದಿ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಕಳೆದ ಮೂರು ವಾರಗಳಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)ಯ ವೈದ್ಯರು ಬರೋಬ್ಬರಿ 90 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಕಿಮ್ಸ್ ನಲ್ಲಿ 78 ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 77 ಹಾಗೂ ಹೊರ ರಾಜ್ಯದ ಓರ್ವ ಸೇರಿ ಒಟ್ಟು 78 ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಶನಿವಾರ ತಿಳಿಸಿದ್ದಾರೆ.

ಹುಬ್ಬಳ್ಳಿ ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್ ಚಿಕಿತ್ಸೆ ಸಿಗುತ್ತಿಲ್ಲ: ಸಚಿವ ಸುಧಾಕರ್
ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಹೃದ್ರೋಗ, ಕ್ಯಾನ್ಸರ್ ಹಾಗೂ ಮೂತ್ರಪಿಂಡ ಖಾಯಿಲೆ ಆಸ್ಪತ್ರೆ ಸ್ಥಾಪನೆ
ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಹುಬ್ಬಳ್ಳಿ ನಗರದಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಕಿದ್ವಾಯಿ ಸಹಯೋಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಮೂತ್ರಪಿಂಡ ಖಾಯಿಲೆ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

