ರಾಜ್ಯಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
ಯಕ್ಷಗಾನ ಲೋಕದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ (Kumble Sundar Rao) ಇಂದು ಬುಧವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.