ರಾಜ್ಯಕುಗನೊಳ್ಳಿ ಚೆಕ್ ಪೋಸ್ಟ್ ಗೆ ಬೊಮ್ಮಾಯಿ ಭೇಟಿ; ಅಕ್ರಮ ಪ್ರವೇಶ ತಡೆಗೆ ಕಟ್ಟುನಿಟ್ಟಿನ ಸೂಚನೆ
ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗು ತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.