ಕುಟುಂಬ ರಾಜಕೀಯ

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯದ ದರ್ಬಾರು; ಡಿಕೆಶಿ ಸಂಪುಟದಲ್ಲಿಯೂ 2ನೇ ತಲೆಮಾರಿನ ನಾಯಕರ ಕಾರುಬಾರು; ಸಾಮರ್ಥ್ಯಕ್ಕಿಂತ ಸಂಪರ್ಕ ಮುಖ್ಯವೇ?
ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದ ನಾಯಕರ ಪುನರಾವರ್ತಿತ ಅವಕಾಶ ಪಕ್ಷವನ್ನು ನಿರ್ಮಿಸಲು ದಶಕಗಳಿಂದ ಕೆಲಸ ಮಾಡುತ್ತಿರುವ ತಳಮಟ್ಟದ ಕಾರ್ಯಕರ್ತರಿಗೆ ಅವಕಾಶಗಳನ್ನು ಮಿತಿಗೊಳಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಾರೆ.

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ ಪಾಟೀಲ್ ಸಮರ್ಥನೆ
ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, ಎಂಜಿನಿಯರ್ ಮಗ ಎಂಜಿನಿಯರ್ ಆಗ್ತಾನೆ, ಹಾಗಿದ್ದಾಗ MLA ಮಗ MLA ಆಗೋದ್ರಲ್ಲಿ ತಪ್ಪೇನು? ಇದರಲ್ಲಿ ತಪ್ಪೇನು ಇಲ್ಲ.

ಕಾಂಗ್ರೆಸ್ ಮಾತ್ರವಲ್ಲ, ಎಲ್ಲಾ ಪಕ್ಷಗಳಲ್ಲಿಯೂ ಕುಟುಂಬ ರಾಜಕೀಯವಿದೆ: ಸತೀಶ್ ಜಾರಕಿಹೊಳಿ
ಪ್ರತಿಯೊಂದು ಪಕ್ಷದಲ್ಲೂ ಕುಟುಂಬ ರಾಜಕೀಯವಿದೆ. ಅಂತಿಮವಾಗಿ, ಪಕ್ಷಗಳು ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗುತ್ತದೆ ಎಂದು ಸತೀಶ್ ಹೇಳಿದರು

ಕುಟುಂಬ ರಾಜಕೀಯದಿಂದ ಕುಟುಂಬವೇ ಛಿದ್ರ: ಲಾಲೂ ಮನೆಯಿಂದ ಹೊರನಡೆದ ಮೂವರು ಪುತ್ರಿಯರು!
ರೋಹಿಣಿ ಮನೆ ತೊರೆದ ನಂತರ ಅವರ ಸಹೋದರಿಯರಾದ ರಾಜಲಕ್ಷ್ಮಿ, ರಾಗಿಣಿ, ಮತ್ತು ಚಂದಾ ತಮ್ಮ ಮಕ್ಕಳೊಂದಿಗೆ ಪಾಟ್ನಾದ ಕುಟುಂಬ ನಿವಾಸವನ್ನು ತೊರೆದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್
"ದಶಕಗಳಿಂದ, ಒಂದು ಕುಟುಂಬವು ಭಾರತೀಯ ರಾಜಕೀಯದ ಮೇಲೆ ಪ್ರಾಬಲ್ಯ ಸಾಧಿಸಿದೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು, ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಪ್ರಸ್ತುತ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ: ಪಟ್ಟಿ ನೀಡಿ ಶಾ, ಮೋದಿ ವಿರುದ್ಧ ಹರಿಹಾಯ್ದ ಜೆಡಿಎಸ್!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ.

'ರಾಜಕೀಯವಾಗಿ ಬೆಳೆಯುವ ದಿನಗಳಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇತ್ತು, ಈಗ ಬೇಡವಾಗಿದೆ'
ಶಿವಲಿಂಗೇಗೌಡರು ರಾಜಕಾರಣಕ್ಕೆ ಪ್ರವೇಶ ಮಾಡಿ, ರಾಜಕೀಯವಾಗಿ ಬೆಳೆಯುವ ದಿನಗಳಲ್ಲಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇತ್ತು. ಈಗ ಅವರಿಗೆ ಬೇಡವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನವೇ ಮಗ್ಗುಲ ಮುಳ್ಳಾಗಿದೆಯಲ್ಲವೇ? ನಿಷ್ಠಾವಂತರ ಕಡೆಗಣಿಸಿ, ಕುಟುಂಬದ 9 ಮಂದಿಗೆ ಮಣೆ ಹಾಕಿರುವುದನ್ನು ಏನನ್ನಬೇಕು?: ಬಿಜೆಪಿ
ಕುಟುಂಬ ರಾಜಕಾರಣದ ತುತ್ತತುದಿಯಲ್ಲಿ ಇರುವ ಕುಮಾರಸ್ವಾಮಿ ಅವರು, ಮತ್ತೊಬ್ಬರತ್ತ ಬೊಟ್ಟು ಮಾಡಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದಿರುವುದು ಹಾಸ್ಯಾಸ್ಪದ. ಸೂಟ್ ಕೇಸ್ ತಲುಪಿಸದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ, ಕುಟುಂಬದ 9 ಮಂದಿಗೆ ಮಣೆ ಹಾಕಿರುವುದನ್ನು ಏನನ್ನಬೇಕು?

'ಮಗನನ್ನು ಮಂತ್ರಿ ಮಾಡಿದ್ದಕ್ಕಾಗಿ ಖರ್ಗೆ ಸೋತರು: ಪುತ್ರನನ್ನು ಶಾಸಕನಾಗಿಸುವ ಉಮೇದಿನಲ್ಲಿ ಸಿದ್ದರಾಮಯ್ಯ ಸೋತರು!'
ರಾಜ್ಯದಾದ್ಯಂತ ಜನಾಕ್ರೋಶ ಸಭೆ ನಡೆಸುವುದಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂಬ ವರದಿಗಳ ಬೆನ್ನಲ್ಲೇ ಪ್ರತಿಪಕ್ಷದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

