ರಾಜ್ಯಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ: ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಕುಮಾರಸ್ವಾಮಿ ದೇವಸ್ಥಾನದ ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.