ದೇಶಮುಂಬೈನ ಕುರ್ಲ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಮೂವರು ಸಾವು, 12 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ
ವಾಣಿಜ್ಯ ನಗರಿ ಮುಂಬೈಯ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿ ಕುಸಿದು ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.