ರಾಜ್ಯಗೃಹಲಕ್ಷ್ಮಿ ಹಣ: ರೊಟ್ಟಿ ಕೇಂದ್ರ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಮಹಿಳೆಯರು
ಕೊಪ್ಪಳ ಜಿಲ್ಲೆಯ ಕುಷ್ಠಗಿ ನಿವಾಸಿಗಳಾದ ಮಕ್ತುಮ್ಬಿ ಕೊಪ್ಪದ, ಸಾಜನಬಿ ದಾದಿಬಾಯಿ, ಹುಸೇನಬಿ ಕಮ್ಮಾರ ಎಂಬ ಮೂವರು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಲಭಿಸಿದ ಆರ್ಥಿಕ ನೆರವನ್ನು ಉಳಿತಾಯ ಮಾಡುವ ಮೂಲಕ ಹುಬ್ಬಳ್ಳಿಯಲ್ಲಿ ರೊಟ್ಟಿ ಮಿಷನ್ ಖರೀದಿಸಿ ಸ್ವಯಂ ಉದ್ಯೋಗ ಆರಂಭಿಸುವಲ್ಲಿ ಮುಂದಾಗಿದ್ದಾರೆ.