ದೇಶದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.