ರಾಜ್ಯಕೊರೋನಾ ಎಫೆಕ್ಟ್: 'ರೈತರು ಬೇಕಾಗಿದ್ದಾರೆ'; ಕೃಷಿ ಕ್ಷೇತ್ರದತ್ತ ಹೊರಳುತ್ತಿದೆ ಜನರ ಆಸಕ್ತಿ!
ಪ್ರತಿ ಸಮಸ್ಯೆಯೊಳಗೆ ಒಂದು ಅವಕಾಶವಿರುತ್ತದೆ ಎನ್ನುತ್ತಾರೆ. ಕೋವಿಡ್-19 ಲಾಕ್ ಡೌನ್ ಹಲವರಿಗೆ ಹಲವು ರೀತಿಯಲ್ಲಿ ಕಷ್ಟಗಳನ್ನು ತಂದೊಡ್ಡಿರಬಹುದು. ಆದರೆ ಇದು ಕೆಲವರ ಬಾಳಲ್ಲಿ ಹೊಸ ಅವಕಾಶಕ್ಕೆ, ಹೊಸ ಚಿಂತನೆಗೆ ದಾರಿ ಮಾಡಿಕೊಟ್ಟಿದೆ. ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವವರಿಗೆ ಇದು ಸಾಕಷ್ಟು ಅವಕಾಶಗಳನ್ನು ಹೊಸದಾಗಿ ಸೃಷ್ಟಿಮಾಡುತ್ತಿದೆ.