ಕೃಷಿ ಚಟುವಟಿಕೆ

ರಾಮನಗರ ಕೈದಿಗೆ ಕೃಷಿ ಮಾಡಲು 90 ದಿನಗಳ ಪೆರೋಲ್ ನೀಡಿದ ಹೈಕೋರ್ಟ್ !
ಅರ್ಜಿದಾರ ಚಂದ್ರ 11 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪೆರೋಲ್ ಮೇಲೆ ಯಾವತ್ತೂ ಬಿಡುಗಡೆಯಾಗಿಲ್ಲ. ಪ್ರಕರಣದ ಸತ್ಯಾಂಶ ಪರಿಶೀಲಿಸಿದರೆ ಪೆರೋಲ್ ಮೇಲೆ ಬಿಡುಗಡೆಯಾಗುವ ಅಗತ್ಯವನ್ನು ಅರ್ಜಿದಾರ ಮೇಲ್ನೋಟಕ್ಕೆ ಸಾಬೀತುಪಡಿಸಿದ್ದಾರೆ.

ಮಳೆ ಇಲ್ಲ, ಕಾರ್ಮಿಕರ ಕೊರತೆ: ಅನಂತಪುರದಲ್ಲಿ ಯುವಕರೇ ನೊಗ ಹೊತ್ತು ಉಳುತ್ತಿರುವ ಕರುಣಾಜನಕ ದೃಶ್ಯ!
ಮಳೆ ನಿರೀಕ್ಷಿತ ಪ್ರಮಾಣದಷ್ಟು ಬಾರದೇ, ಕಾರ್ಮಿಕರ ಕೊರತೆ ಎದುರಾಗಿರುವುದು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಉಂಟುಮಾಡಿದೆ.

ದೇವರು ಕೊಟ್ರೂ ಪೂಜಾರಿ ಕೊಡ್ತಿಲ್ಲ: ಧಾರಾಕಾರ ಮಳೆಯಾಗುತ್ತಿದ್ದರೂ ರೈತರ ಬೆಳೆಗಳಿಗೆ ಬಿಡ್ತಿಲ್ಲ ನೀರು!
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಸಾಕಷ್ಟು ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದೆ. ಈ ವರ್ಷ ಮುಂಗಾರು ವಿಳಂಬದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯ ತಾವು ಬೆಳೆದಿರುವ ಬೆಳೆಗಳಿಗೆ ನೀರು ಬಿಡಬೇಕು ಎಂದು ಒತ್ತಾಯಿಸುತ್ತಿದ್ದಾರೆ

ಕೊಡಗಿನಲ್ಲಿ ರಸಗೊಬ್ಬರಗಳ ತೀವ್ರ ಕೊರತೆ: ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ
ಕೊಡಗಿನಾದ್ಯಂತ ಕೃಷಿ ಚಟುವಟಿಕೆಗಳ ಮೇಲೆ ಗೊಬ್ಬರದ ತೀವ್ರ ಕೊರತೆ ಗಂಭೀರ ಪರಿಣಾಮವನ್ನು ಬೀರಿದ್ದು, ಈ ನಡುವೆ ತಿಂಗಳಾಂತ್ಯದೊಳಗೆ ರೈತರಿಗೆ ಪರಿಹಾರ ದೊರೆಯಲಿದೆ ಎಂದು ಕೃಷಿ ಇಲಾಖೆ ಭರವಸೆ ನೀಡಿದೆ.

ಮುಂಗಾರು ಆರಂಭಕ್ಕೆ ಕ್ಷಣಗಣನೆ: ಕೃಷಿ ಚಟುವಟಿಕೆ ಸಿದ್ಧತೆ ಬಗ್ಗೆ ಸಿಎಂ ಯಡಿಯೂರಪ್ಪ ಪರಿಶೀಲನೆ
ಕೊರೋನಾ 2ನೇ ಅಲೆ ನಡುವಲ್ಲೇ ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಚಟುವಟಿಕೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೇಚನೆ ನಡೆಸಿದರು.

ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ, ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಸಹಕರಿಸಬೇಕು: ಬಿ.ಸಿ. ಪಾಟೀಲ್
ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ, ಬಿತ್ತನೆ ಬೀಜಕ್ಕಾಗಿ ಪಾಸ್ ಪಡೆಯಿರಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಮಹಾಮಾರಿ ಕೊರೋನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

