ಕೃಷ್ಣ ಬೈರೇಗೌಡ

ಟ್ರಾಫಿಕ್, ಕಸ ಬೆಂಗಳೂರಿನ ಟಾಪ್ 2 ಸಮಸ್ಯೆ; ಕಸದ ವಾರ್ಡನ್ ನೇಮಕ ಮಾಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕಸ ನಿರ್ವಹಣೆ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಪರಿಸ್ಥಿತಿಯನ್ನು ಹೇಗೆ ಸುಧಾರಿಸಿಬೇಕು ಅನ್ನೋದರ ಬಗ್ಗೆ ಸಲಹೆ ತೆಗೆದುಕೊಳ್ಳಲು ಇಂದು ಸಾರ್ವಜನಿಕರ ಸಂವಾದ ನಡೆಸಿದ್ದೇವೆ ಎಂದರು.

ಸರಳ, ವೇಗದ E-Aasthi 2.0 ಗೆ ರಾಜ್ಯ ಸರ್ಕಾರ ಚಾಲನೆ; ಇನ್ಮುಂದೆ ಇ-ಖಾತಾ ಮತ್ತಷ್ಟು ಸುಲಭ..!
ಕಳೆದ 2024ರ ಅಕ್ಟೋಬರ್‌ನಲ್ಲಿ ಜಾರಿಗೆ ತರಲಾಗಿದ್ದ ಮೊದಲ ಆವೃತ್ತಿಯಲ್ಲಿ ಸಾರ್ವಜನಿಕರು ಎದುರಿಸುತ್ತಿದ್ದ ದಾಖಲೆ ಅಪ್‌ಲೋಡ್ ಸಮಸ್ಯೆ ಸೇರಿದಂತೆ ಎಲ್ಲಾ ತಾಂತ್ರಿಕ ಲೋಪದೋಷಗಳನ್ನು ಈ ಹೊಸ 2.0 ಆವೃತ್ತಿಯಲ್ಲಿ ಸಂಪೂರ್ಣವಾಗಿ ನಿವಾರಿಸಲಾಗಿದೆ.

ಬೆಂಗಳೂರಿನ ಗುಂಡಿ ಮುಚ್ಚಲು 'ಜೆಟ್ ಪ್ಯಾಚರ್': ಪ್ರಾಯೋಗಿಕ ಕಾರ್ಯಾಚರಣೆ!
ಸಂಚಾರಕ್ಕೆ ಅಡಚಣೆಯಾಗದಂತೆ ಅಥವಾ ಹೆಚ್ಚುವರಿ ದಟ್ಟಣೆಯನ್ನು ಉಂಟುಮಾಡದಂತೆ ಸಣ್ಣ ಗುಂಡಿಗಳನ್ನು ದುರಸ್ತಿ ಮಾಡಲು ಸೂಕ್ತವಾದ ಹೊಸ ತಂತ್ರಜ್ಞಾನವನ್ನು ಇದು ಒಳಗೊಂಡಿದೆ ಎಂದು ಸಚಿವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

Sahaya 3.0 ಪೋರ್ಟಲ್ ಸಿದ್ಧ: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ಬೆಂಗಳೂರಿಗರು ದೂರು ಸಲ್ಲಿಸಲು ಅವಕಾಶ..!
ಇದರಿಂದ ಇನ್ಮುಂದೆ ಬೆಂಗಳೂರಿನ ಸಾರ್ವಜನಿಕರು ರಸ್ತೆ ಗುಂಡಿ, ಬೀದಿ ದೀಪ, ಕಸದ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಟೈಪ್ ಮಾಡುವ ಅಗತ್ಯವಿಲ್ಲ. ಕೇವಲ ಒಂದು ಧ್ವನಿ ಸಂದೇಶ (Voice Note) ರೆಕಾರ್ಡ್ ಮಾಡುವ ಮೂಲಕ ಅತ್ಯಂತ ಸರಳವಾಗಿ ದೂರನ್ನು ನೋಂದಾಯಿಸಬಹುದಾಗಿದೆ.

ರಸ್ತೆ ಸಾರ್ವಜನಿಕ ಆಸ್ತಿ, ಕಾರು ಮಾಲೀಕರ ಸ್ವತ್ತಲ್ಲ; ಸಂಚಾರ ದಟ್ಟಣೆ ಕಡಿಮೆಯಾಗಬೇಕಾದರೆ ಪಾರ್ಕಿಂಗ್ ನಿಯಂತ್ರಣ ಅಗತ್ಯ: ಸಚಿವ ಕೃಷ್ಣ ಬೈರೇಗೌಡ (Interview)

ಕರ್ತವ್ಯ ಲೋಪ ಸಹಿಸಲ್ಲ, ಕರ್ತವ್ಯಕ್ಕೆ ಗೈರಾದ್ರೆ ಸೇವೆಯಿಂದ ವಜಾ: ಪಾಲಿಕೆ ಸಿಬ್ಬಂದಿಗೆ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!
ರಸ್ತೆ, ಫುಟ್‌ಪಾತ್ ಹಾಗೂ ಸ್ಲ್ಯಾಬ್‌ಗಳ ಮೇಲೆ ಬಿದ್ದಿರುವ ನಿರ್ಮಾಣ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಿ, ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.

'ನಿರ್ಲಕ್ಷ್ಯ ಮಾಡಿದ್ರೆ ಕ್ರಮ ಖಚಿತ': ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ತಪಾಸಣೆ; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ! Video
ಶನಿವಾರ ಬೆಳಗ್ಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ಹಲವು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR; ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ'; ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ
ನಗರದ ಐದು ನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್‌ಫೋರ್ಸ್‌ಗಳನ್ನು ರಚಿಸಿ, ಫುಟ್‌ಪಾತ್‌ಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಮುಂಜಾನೆ 5:30ಕ್ಕೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ರೌಂಡ್ಸ್: ಕಸ ವಿಲೇವಾರಿ ವ್ಯವಸ್ಥೆ ಪರಿಶೀಲನೆ, ಗೇಟ್ ಬಳಿಯೇ ಕಸ ಸಂಗ್ರಹಿಸುವಂತೆ ಸಿಬ್ಬಂದಿಗೆ ಸೂಚನೆ; Video
ಮನೆ-ಮನೆಗೆ ತ್ಯಾಜ್ಯ ಸಂಗ್ರಹಿಸುವ ಸ್ಥಳಗಳಲ್ಲಿ ಸಚಿವರು ಹಾಗೂ ಬಿಎನ್‌ಸಿಸಿ ಆಯುಕ್ತರು ಮನೆಗಳಿಂದ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತಿದೆಯೇ, ನಿಯಮಿತವಾಗಿ ಕಸ ಸಂಗ್ರಹಿಸಲಾಗುತ್ತಿದೆಯೇ ಹಾಗೂ ರಸ್ತೆಗಳನ್ನು ಸ್ವಚ್ಛವಾಗಿಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು.

