ರಾಜ್ಯಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ, ಮಾಗಡಿ ಕೋಟೆ ಸಂರಕ್ಷಣೆ- ಡಾ.ಸಿ.ಎನ್.ಅಶ್ವತ್ಥ ನಾರಾಯಣ
ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂಪಾಯಿ ನಗದು ಸಹಿತ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.