ರಾಜ್ಯವಿಧಾನ ಸೌಧ ಮುಂದೆ ಕೆಂಪೇಗೌಡ, ಬಸವೇಶ್ವರ ಪುತ್ಥಳಿಗೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ
ವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು.