ಕೆಆರ್ ಎಸ್ ಅಣೆಕಟ್ಟು

KRS ನೀರು ಬಿಡುಗಡೆ ವಿಳಂಬ: ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ
ವಿವಿಧ ರೈತ ಸಂಘಟನೆಗಳ ಸದಸ್ಯರು ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಹಳೆಯ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ತಡೆದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

KRS ಡ್ಯಾಂ ಸುತ್ತ 'ಟ್ರಯಲ್ ಬ್ಲಾಸ್ಟ್'; ಜಿಲ್ಲಾಡಳಿತದ ಕ್ರಮಕ್ಕೆ ಸಂಸದೆ ಸುಮಲತಾ ವಿರೋಧ
KRS ಡ್ಯಾಂ ಸುತ್ತಮುತ್ತಲಿರುವ ಗಣಿಗಳಲ್ಲಿ ಟ್ರಯಲ್ ಬ್ಲಾಸ್ಟ್ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾವೇರಿ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ, ವಾಸ್ತವಾಂಶ ತಿಳಿಯಲು ಅಣೆಕಟ್ಟುಗಳಿಗೆ ಸಮಿತಿ ಸದಸ್ಯರ ಆಹ್ವಾನಿಸುತ್ತೇವೆ- ಡಿಕೆಶಿ
ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪ್ರಶ್ನಿಸುತ್ತೇವೆ ಎಂದು ಹೇಳಿರುವ ಡಿಸಿಎಂ ಡಿಕೆ ಶಿವಕುಮಾರ್, ಅಣೆಕಟ್ಟುಗಳಿಗೆ ಸಮಿತಿ ಸದಸ್ಯರ ಆಹ್ವಾನಿಸಿ ವಾಸ್ತವಾಂಶ ತಿಳಿಯುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

KRS ನಲ್ಲಿ ಚಿರತೆ ಕಣ್ಣಾಮುಚ್ಚಾಲೆ; 15 ದಿನಗಳಿಂದ ಬೃಂದಾವನ ಬಂದ್, ಅರಣ್ಯ ಇಲಾಖೆ ವಿರುದ್ಧ ಪ್ರವಾಸಿಗರು, ಸ್ಥಳೀಯರ ಆಕ್ರೋಶ!
ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸಿಗರ ಆಕರ್ಷಣೀಯ ತಾಣಗಳಲ್ಲಿ ಒಂದಾದ ಕೆಆರ್ಎಸ್ ಬೃಂದಾವನ ಗಾರ್ಡನ್ ಚಿರತೆ ಹಾವಳಿಯಿಂದಾಗಿ ಕಳೆದ 15 ದಿನಗಳಿಂದ ಬಂದ್ ಆಗಿದ್ದು, ಅರ್ಧ ತಿಂಗಳೇ ಕಳೆದರೂ ಚಿರತೆಗಳನ್ನು ಹಿಡಿಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ವಿರುದ್ಧ ಪ್ರವಾಸಿಗರು, ಸ್ಥಳೀಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಆರ್‌ಎಸ್ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾ
ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ; ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ: ಸಚಿವ ಮುರುಗೇಶ್ ನಿರಾಣಿ
ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ಕೆಆರ್ ಎಸ್ ಡ್ಯಾಂ ಬಿರುಕುಬಿಟ್ಟಿದ್ದರೆ ಕರೆದುಕೊಂಡು ಹೋಗಿ ತೋರಿಸಲಿ, ಮುಖ್ಯಮಂತ್ರಿಗಳ ಗಮನಕ್ಕೆ ತರಲಿ: ಸಂಸದ ಪ್ರತಾಪ್ ಸಿಂಹ
ಕೆಆರ್ ಎಸ್ ಬಿರುಕು ಬಿಟ್ಟಿದೆಯೇ, ಮಾಧ್ಯಮದವರು ಖುದ್ದಾಗಿ ಹೋಗಿ ನೋಡಿದ್ದೀರಾ ಅಥವಾ ಬಿರುಕು ಬಿಟ್ಟಿದೆ ಎನ್ನುವವರು ಮಾಧ್ಯಮದವರನ್ನು ಕರೆದುಕೊಂಡು ಹೋಗಿ ತೋರಿಸಿದ್ದಾರಾ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಕೆಆರ್ಎಸ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸರ್ಕಾರ ಸಿದ್ಧ- ಸಚಿವ ಆರ್.ಅಶೋಕ್
ಕೆಆರ್ಎಸ್ ಅಣೆಕಟ್ಟೆ ಭದ್ರತೆ ದೃಷ್ಟಿಯಿಂದ ವೈಜ್ಞಾನಿಕ ಅಧ್ಯಯನ ನಡೆಸಿ ಸಂಪೂರ್ಣವಾಗಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ

ಕಾವೇರಿ ನೀರು ಹಂಚಿಕೆಯ ಅಂತಿಮ ವಿಚಾರಣೆ: ಮಂಡ್ಯ, ಕೆಆರ್ ಎಸ್ ಸುತ್ತಮುತ್ತ ಬಿಗಿ ಭದ್ರತೆ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅಂತಿಮ ವಿಚಾರಣೆಯನ್ನು ಸುಪ್ರೀಂ...

