ರಾಜ್ಯಕೆಎಸ್ ಆರ್ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಅವಘಡ: ತನಿಖೆ ಪ್ರಗತಿಯಲ್ಲಿ, ಪೊಲೀಸರು ಹೇಳುವುದೇನು?
ರಾಜಧಾನಿ ಬೆಂಗಳೂರಿನ ಮಜೆಸ್ಟಿಕ್ ಪ್ರದೇಶದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಸಂಖ್ಯೆ 11301 ರ ಬೋಗಿ 1 ಮತ್ತು 2ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.