ರಾಜ್ಯಕರ್ತವ್ಯದ ವೇಳೆ ಅಪಘಾತದಲ್ಲಿ ಸಾವು: ನಾಲ್ವರು KSRTC ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ
ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ವಿತರಿಸಿದ್ದಾರೆ. ಕೆಎಸ್ಆರ್ಟಿಸಿಯ ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಮೊತ್ತವನ್ನು ನೀಡಲಾಯಿತು.