ಸಿನಿಮಾ ಸುದ್ದಿಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!
ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.