ಕೆಪಿಎಸ್‌ಸಿ

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ
ಕರ್ನಾಟಕ ಲೋಕಸೇವಾ ಆಯೋಗದ ಮೇಲೆ ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ಹಗರಣಗಳ ಹಿನ್ನೆಲೆಯಲ್ಲಿ, ಆಯೋಗವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

KPSC Scam: 'ನಿನಗೆ 5 ರೂಪಾಯಿ ರೇಷನ್ ಕೂಡ ಸಿಗದ ಹಾಗೆ ಮಾಡುತ್ತೇವೆ'; ಅಕ್ರಮ ವಿರುದ್ಧ ದೂರು ದಾಖಲಿಸಿದ್ದವರಿಗೆ ಬೆದರಿಕೆ ಕರೆ
KPSC Scam: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಗೆ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

KPSC ಹಗರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹುದ್ದೆಗೆ 40 ಲಕ್ಷ ರೂ ಡೀಲ್; ಅಭ್ಯರ್ಥಿ ಹೇಳಿಕೆಯಿಂದ IAS ಅಧಿಕಾರಿ ಗಂಗ್ವಾರ್ ಬಲೆಗೆ..!
ಡಿಸೆಂಬರ್ 2025 ರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಕರೆ ಮಾಡಿ, ರೂ.40 ಲಕ್ಷ ನೀಡಿದರೆ ಹುದ್ದೆ ಕೊಡಿಸುವುದಾಗಿ ಡೀಲ್ ಕುದುರಿಸಿದ್ದ. ನಾನು ಮುಂಗಡವಾಗಿ ರೂ.20 ಲಕ್ಷ ನೀಡಿದ್ದೆ" ಎಂದು ಸುಹೇಲ್ ಸಿಐಡಿ ಮುಂದೆ ಒಪ್ಪಿಕೊಂಡಿದ್ದಾನೆ.

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!
2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಗಂಗ್ವಾರ್ ಸದ್ಯ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಎಂಎಸ್‌ಎಂಇ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

KAS ಪರೀಕ್ಷೆಯಲ್ಲಿ ಅಕ್ರಮವೇ ನಡೆದಿಲ್ಲ: ಸರ್ಕಾರಕ್ಕೆ KPSC ಸ್ಪಷ್ಟನೆ
ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆಯಂತೆ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಅವರು ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದ್ದಾರೆ.

KPSC ಅವ್ಯವಸ್ಥೆ: ಬೆಳಿಗ್ಗೆ ಪರೀಕ್ಷೆ, ಮಧ್ಯರಾತ್ರಿ 12 ಗಂಟೆಗೆ ಹಾಲ್ ಟಿಕೆಟ್ ವಿತರಣೆ; ಅಭ್ಯರ್ಥಿಗಳ ಆಕ್ರೋಶ, Video Viral
ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ಇದೇ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳ ಭಾಷಾಂತರದ ಗೊಂದಲದಿಂದಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯದವರ ನೆರವಿಗೆ ಬಂದಿದ್ದ ಹೈಕೋರ್ಟ್ ಸುಮಾರು 120 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.

KPSC ಕರ್ಮಕಾಂಡ: ಮತ್ತೆ ಮರುಪರೀಕ್ಷೆಗೆ ಆಗ್ರಹ; ಫೆಬ್ರವರಿ 18ರಂದು ವಿದ್ಯಾರ್ಥಿಗಳ ಪ್ರತಿಭಟನೆ
ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ.

BBMP ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ: KPSC ಗೆ 'ಹೈ' ನೋಟಿಸ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಎಚ್‌ಎಲ್‌ಸಿ ಹುದ್ದೆ ನೇಮಕ ವಿಚಾರ: ಕೆಪಿಎಸ್‌ಸಿ ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ!
ಕೆಪಿಎಸ್‌ಸಿ ಕಾನೂನು ಕೋಶದ ಮುಖ್ಯಸ್ಥ (ಎಚ್‌ಎಲ್‌ಸಿ) ಹುದ್ದೆಗೆ ನೇಮಕಾತಿಗೆ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆ ಹಿಂಪಡೆದು, ಕಾರ್ಯದರ್ಶಿ ಹೊಸತಾಗಿ ಅಧಿಸೂಚನೆ ಹೊರಡಿಸಿರುವ ಮೂಲಕ ಕಾರ್ಯದರ್ಶಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆಂದು ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ಗುರುವಾರ ಆರೋಪಿಸಿದ್ದಾರೆ.

