ಕೆಪಿಟಿಸಿಎಲ್

ಸುದೀರ್ಘ ಸೇವೆ ಸಲ್ಲಿಸಿದವರಿಗೆ ಸಣ್ಣ ಮೊತ್ತ ನೀಡಿದರೆ ಆಕಾಶ ಕಳಚಿ ಬೀಳದು: ಹೈಕೋರ್ಟ್
ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ವೇತನ ಹಾಗೂ ಪಿಂಚಣಿ ಮರುನಿಗದಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದ ನಿವೃತ್ತ ಉದ್ಯೋಗಿಗಳಿಗೆ ಹೈಕೋರ್ಟ್ ನೆರವಿನ ಹಸ್ತ ಚಾಚಿದ್ದು...

ಪೀಣ್ಯ ಪೇಪರ್ ಗೋಡೌನ್‌ನಲ್ಲಿ ಬೆಂಕಿ ಅವಘಡ; ಬೆಂಗಳೂರು ನಗರದ ಕೆಲವೆಡೆ ವಿದ್ಯುತ್ ಕಡಿತ
ಪೇಪರ್ ರೋಲ್ ಸ್ಟೋರ್‌ಹೌಸ್ ಮತ್ತು ಗೋಡೌನ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಪ್ರಸರಣ ಮಾರ್ಗವನ್ನು ಸ್ಥಗಿತಗೊಳಿಸಲಾಗಿದ್ದು, ನೈಋತ್ಯ ಮತ್ತು ಪಶ್ಚಿಮ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆ 5 ರಿಂದ ತಡರಾತ್ರಿಯವರೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

90 ದಿನಗಳ ಹೆರಿಗೆ ಭತ್ಯೆ ತಡೆ ಹಿಡಿದಿದ್ದ ಕೆಪಿಟಿಸಿಎಲ್ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ
ಕಾನೂನುಬಾಹಿರವಾಗಿ ಮಹಿಳೆಯೊಬ್ಬರ 90 ದಿನಗಳ ಹೆರಿಗೆ ಭತ್ಯೆ ತಡೆ ಹಿಡಿದಿದ್ದ ರಾಜ್ಯ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

KPTCL ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಬೆಂಗಳೂರು: ಇಂದಿನಿಂದ ಗುರುವಾರದವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ; ಹೆಚ್ಚಿನ ವಿವರ ತಿಳಿಯಿರಿ
ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಂಡಿರುವುದರಿಂದ ಇಂದಿನಿಂದ ಗುರುವಾರದವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ.

ವಾರ್ಷಿಕ ವೇತನ ಹೆಚ್ಚಳಕ್ಕೆ ನಿವೃತ್ತಿ ದಿನಾಂಕ ಬಾಧಕವಲ್ಲ: ಸರ್ಕಾರಿ ನೌಕರರ ಇನ್ಕ್ರಿಮೆಂಟ್ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು, KPTCLಗೆ ಹಿನ್ನಡೆ
ಸರ್ಕಾರಿ ನೌಕರರ ವಾರ್ಷಿಕ ವೇತನ ಹೆಚ್ಚಳಕ್ಕೆ ಅವರ ನಿವೃತ್ತಿ ದಿನಾಂಕ ಬಾಧಕವಲ್ಲ. ಸರ್ಕಾರಿ ನೌಕರರು ಮಾರನೇ ದಿನ ನಿವೃತ್ತರಾಗುತ್ತಿದ್ದರೂ ಅಂತಹ ನೌಕರರಿಗೆ ವೇತನ ಹೆಚ್ಚಳ ಅಥವಾ ಇನ್ಕ್ರಿಮೆಂಟ್ ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್
ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು.

ನಾಳೆಯಿಂದ ಕೆಪಿಟಿಸಿಎಲ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಅಗತ್ಯ ಸೇವೆಗಳಿಗೆ ವಿದ್ಯುತ್ ಪೂರೈಕೆ ಅಬಾಧಿತ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘವು ನಾಳೆ ಅಂದರೆ ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ ಎಂದು ಘೋಷಿಸಿದೆ.

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎ
ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವ ಸಂಭಾವ್ಯರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಟ್ಟಿ ಮಾಡಿದೆ.

