ರಾಜ್ಯಜನ, ಜಾನುವಾರುಗಳಿಗೆ ಸಂಕಷ್ಟ, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.