ರಾಜ್ಯಕೇಂದ್ರದ ಮೂರು ತಂಡಗಳು ಗುರುವಾರ ರಾಜ್ಯಕ್ಕೆ ಭೇಟಿ; 12 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ
ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ.