ರಾಜಕೀಯಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಗುರುವಾರ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಆ ಪಕ್ಷದ ಚುನಾವಣೆ ಪ್ರಣಾಳಿಕೆ ಕುರಿತು ಪ್ರತಿಕ್ರಿಸಿದ ಕಿಶನ್ ರೆಡ್ಡಿ, ದೇಶದ ಜನರ ನಡುವೆ ಒಡಕು ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದು ತಪ್ಪು ಎಂದರು.