ದೇಶಬಂಗಾಳದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಬೆಂಗಾವಲು ಪಡೆ ಮೇಲೆ ದಾಳಿ: ಘಟನೆ ಹಿಂದೆ ಟಿಎಂಸಿ ಕೈವಾಡ ಎಂದ ಬಿಜೆಪಿ
ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.