ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

'ಅಮ್ಮಾ.. ನಿರ್ಮಲಮ್ಮಾ... ಯಾಕೆ ಸುಳ್ಳು ಹೇಳ್ತೀಯಾ ತಾಯಿ... 11,495 ಕೋಟಿ ರೂ. ಯಾಕೆ ಕೊಡಲಿಲ್ಲ': ಸಿದ್ದರಾಮಯ್ಯ
ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಹಾಸ್ಯಮಿಶ್ರಿತವಾಗಿ ನಯವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಉಡುಪಿ ಮಠದ ಸಂಪ್ರದಾಯ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನ ಪ್ರತಿಷ್ಠಿತ ವಿವಾಹ ಮತ್ತು ಆರತಕ್ಷತೆ ಸ್ಥಳವೊಂದರಲ್ಲಿ ನೆರವೇರಿತು.

30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ- ನಿರ್ಮಲಾ ಸೀತಾರಾಮನ್
ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಮ್ಮು ಕಾಶ್ಮೀರಕ್ಕಾಗಿ ನೀತಿಗಳ ರಚನೆಗೆ ನೈಜ ಪರಿಸ್ಥಿತಿ ಅರಿಯುವ ಪ್ರಯತ್ನ ಸಾಗಿದೆ; ನಿರ್ಮಲಾ ಸೀತಾರಾಮನ್
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಪಟ್ಟ ನೀತಿಗಳನ್ನು ರಚಿಸುವ ಸಲುವಾಗಿ ಅಲ್ಲಿನ ನೈಜ ಪರಿಸ್ಥಿತಿಯನ್ನು ಅರಿಯಲು ಕೇಂದ್ರ ಸರ್ಕಾರ ಉತ್ಸುಕವಾಗಿವೆ ಎಂದು ಉನ್ನತ ಕೈಗಾರಿಕಾ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರ

