ಕೇರಳ ಪೊಲೀಸರು

ಹೋಟೆಲ್ ನ 3ನೇ ಮಹಡಿಯಿಂದ ಜಿಗಿದು ಪರಾರಿಯಾಗಿದ್ದ ಮಲಯಾಳಂ ಖ್ಯಾತ ನಟ ಶೈನ್ ಟಾಮ್ ಚಾಕೊ ಬಂಧನ!
ಚಾಕೊ ಶನಿವಾರ ಕೊಚ್ಚಿ ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಉನ್ನತ ಪೊಲೀಸ್ ಮೂಲಗಳ ಪ್ರಕಾರ, ನಟನಿಗೆ ಜಾಮೀನು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

1.2 ಕೋಟಿ ರೂ. ದರೋಡೆ: ಜೋಶಿ ಮನೆಯಲ್ಲಿ ಕಳ್ಳತನಕ್ಕೂ ಮುನ್ನ 2,700 ಕಿ.ಮೀ. ಪ್ರಯಾಣಿಸಿದ್ದ 'ಬಿಹಾರ್ ರಾಬಿನ್ ಹುಡ್' ಇರ್ಫಾನ್!
ಮಲಯಾಳಂ ಚಲನಚಿತ್ರ ನಿರ್ದೇಶಕ ಜೋಶಿ ಅವರ ನಿವಾಸದಲ್ಲಿ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಬಿಹಾರದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪತಿ ಇರ್ಫಾನ್ ಕಳ್ಳತನಕ್ಕೂ ಮುನ್ನ ಬಿಹಾರದ ಸೀತಾಮರ್ಹಿ ನಿಂದ ಕೇರಳದ ಕೊಚ್ಚಿಗೆ 2700 ಕಿ.ಮೀ ಪ್ರಯಾಣಿಸಿದ್ದನು.

ಚಿಕ್ಕಮಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಸುರೇಶ್ ಬಂಧನ
20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಭಜಕ ಶಕ್ತಿಗಳಿಗೆ ಉತ್ತೇಜನ: ಕೇರಳ ಸ್ಫೋಟ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲು
ವಿವಿಧ ಗುಂಪುಗಳ ಮಧ್ಯೆ ಭಿನ್ನಾಭಿಪ್ರಾಯ ಹೆಚ್ಚಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲಾಗಿದೆ.

ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು: ಕೇರಳ ಪೊಲೀಸರಿಂದ ತೀವ್ರ ತನಿಖೆ
ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!
ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿತ್ತು.

ಪ್ರವೀಣ್ ನೆಟ್ಟಾರು ಹಂತಕರ ಬಂಧನಕ್ಕೆ ಕೇರಳ ಪೊಲೀಸರ ನೆರವು, 15 ಜನರನ್ನು ವಶಕ್ಕೆ ಪಡೆದು ವಿಚಾರಣೆ: ಆರಗ ಜ್ಞಾನೇಂದ್ರ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣ: ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ.

ಕೇರಳ: ಒಂದೇ ಕುಟುಂಬದ 4 ಸಾವು; ಗಾಯವಾದ ಸ್ಥಿತಿಯಲ್ಲಿ 3 ಮಂದಿ, ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ಒಂದೇ ಕುಟುಂಬದ ಮೂವರು ಗಾಯಗಳೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕೃತ್ಯವೆಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

