ದೇಶಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಕನಸು ಇಂದು ನನಸಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ದೇಶದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 144ನೇ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಗುಜರಾತ್ ರಾಜ್ಯದ ನರ್ಮದಾ ಜಿಲ್ಲೆಯ ಕೇವಾಡಿಯಾ ಎಂಬ ಪಟ್ಟಣದಲ್ಲಿರುವ ಪಟೇಲ್ ಅವರ ಏಕತೆ ಪ್ರತಿಮಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.