ರಾಜ್ಯಕಾಂಗ್ರೆಸ್ 3ನೇ ಪಟ್ಟಿ: ಅಥಣಿ ಟಿಕೆಟ್ ಸವದಿಗೆ, ಕೋಲಾರಕ್ಕೆ ಕೊತ್ತೂರು ಮಂಜುನಾಥ್; ಶೆಟ್ಟರ್ ಗೆ 'ಕೈ' ಗಾಳ, ಹುಬ್ಬಳ್ಳಿ ಕ್ಷೇತ್ರ ನಿಗೂಢ
ಕಾಂಗ್ರೆಸ್ ಪಕ್ಷ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ್ ಸವದಿಗೆ ಅಥಣಿ ಟಿಕೆಟ್ ನೀಡಲಾಗಿದ್ದು, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ ಗೆ ಟಿಕೆಟ್ ನೀಡಲಾಗಿದೆ.