ರಾಜ್ಯಕೊಪ್ಪಳ ಜಿಲ್ಲಾ ಪಂಚಾಯಿತಿಗೆ ಅಧ್ಯಕ್ಷರೇ ಇಲ್ಲ! ಜಿಲ್ಲಾ ಪಂಚಾಯಿತಿಯ ವೆಬ್ಸೈಟ್ನಲ್ಲಿ ಎಡವಟ್ಟು
ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೇಲೆ ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳು ಕಣ್ಣಿಟ್ಟಿದ್ದು, ಅಧಿಕಾರಕ್ಕಾಗಿ ತೆರೆಮರೆಯ ಕಸರತ್ತು ನಡೆಸಿವೆ. ಹಾಲಿ ಅಧ್ಯಕ್ಷ ವಿಶ್ವನಾಥರಡ್ಡಿ ಕಾಂಗ್ರೆಸ್ ಪಕ್ಷ ಪ್ರತಿನಿಧಿಸಿ ಆಯ್ಕೆಯಾಗಿದ್ದರೂ, ಸದ್ಯ ಬಿಜೆಪಿ ಮಡಿಲು ಸೇರಿರುವುದರಿಂದ ಅಧ್ಯಕ್ಷ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬ ಕುತೂಹಲ ಜಿಲ್ಲೆಯಲ್ಲಿದೆ.