ಕೊರೋನಾ ನಿರ್ವಹಣೆ

'ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ'
ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ 8 ವಲಯ ವಿಂಗಡಣೆ, 8 ಹಿರಿಯ ಐಎಎಸ್ ಅಧಿಕಾರಿಗಳ ನೇಮಕ
ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರನ್ನು 8 ವಲಯಗಳಾಗಿ ವಿಭಾಗಿಸಿ ಪ್ರತೀ ವಲಯಗಳಿಗೆ ಓರ್ವ ಸಚಿವರು ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗೆ ಜವಾಬ್ದಾರಿ ನೀಡಲಾಗಿದೆ.

ಮುಂಬಯಿ-ಚೈನ್ನೈಗಿಂತ ಬೆಂಗಳೂರಿನಲ್ಲಿ ಕೋವಿಡ್-19 ನಿರ್ವಹಣೆ ಉತ್ತಮ: ಅಶ್ವತ್ಥ ನಾರಾಯಣ
ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಮುಂಬೈ ಮತ್ತಿತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೀಗಾಗಿ ಯಾರೂ ಆಧೈರ್ಯದಿಂದ ನಗರ ಬಿಟ್ಟು ತಮ್ಮ ಊರುಗಳ ಕಡೆ ಹೋಗುವುದು ಬೇಡ.

ತಪ್ಪುಗಳನ್ನು ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ: ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ
ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಸೂಚನೆಯನ್ನು ನೀಡಿದ್ದಾರೆ.

