ಕೊರೋನಾ ಪರೀಕ್ಷೆ

ವಿದೇಶಗಳಿಂದ ಪ್ರಯಾಣಿಕರು ಆಗಮನ: ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ
ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಹೆಚ್ಚಿಸುತ್ತಿದ್ದಂತೆ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಯಿತು.

ವಲಸಿಗರ ಮರಳುವಿಕೆಯಿಂದ ರಾಜ್ಯದಲ್ಲಿ ಮತ್ತೆ ಸೋಂಕು ಹೆಚ್ಚಳ ಭೀತಿ: ರೈಲು, ಬಸ್ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ನಿರ್ಧಾರ
ಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ...

ಒಂದೇ ದಿನದಲ್ಲಿ ದಾಖಲೆಯ 20 ಲಕ್ಷ ಕೊರೋನಾ ವೈರಸ್ ಪತ್ತೆ ಪರೀಕ್ಷೆ; ಚೇತರಿಕೆ ಪ್ರಮಾಣ ಶೇ.86.23: ಆರೋಗ್ಯ ಸಚಿವಾಲಯ
ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 20 ಲಕ್ಷ ಕೊರೋನಾ ವೈರಾಣು ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಸೋಂಕು ಪತ್ತೆ ಪರೀಕ್ಷೆಯ ದಾಖಲೆ ಸಂಖ್ಯೆಯಾಗಿದೆ.

ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸುಧಾಕರ್
ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೊರೋನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಹಂಪಿಯತ್ತ ಮುಖ ಮಾಡಿದ ಪ್ರವಾಸಿಗರು: ಮೊಬೈಲ್ ವ್ಯಾನ್ ಮೂಲಕ ಕೋವಿಡ್ ಪರೀಕ್ಷೆಗೆ ಮುಂದಾದ ಅಧಿಕಾರಿಗಳು
ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದಂತೆಯೇ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಹಂಪಿಯತ್ತ ಪ್ರವಾಸಿಗರು ಮುಖ ಮಾಡಿದ್ದು, ದಿನ ಕಳೆಯುತ್ತಿದಂತೆಯೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಮೊಬೈಲ್ ಕೋವಿಡ್ ವ್ಯಾನ್ ಮೂಲಕ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

ಕೋವಿಡ್-19: ಕೊರೋನಾ ಪರೀಕ್ಷೆ ದರವನ್ನು ಮತ್ತಷ್ಟು ಇಳಿಸಿದ ರಾಜ್ಯ ಸರ್ಕಾರ
ಕೊರೋನಾ ಸೋಂಕು ಪತ್ತೆಗೆ ನಡೆಸುವ ಆರ್'ಟಿ-ಪಿಸಿಆರ್ ಪರೀಕ್ಷೆಯ ದರವನ್ನು ಮತ್ತಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪ್ರಯೋಗಾಲಯ ಪರೀಕ್ಷಾ ಶುಲ್ಕವನ್ನು ರೂ.400ಗಳಷ್ಟು ಕಡಿತಗೊಳಿಸಿದೆ.

ಉಪಚುನಾವಣೆ, ಪರಿಷತ್ ಅಭ್ಯರ್ಥಿಗಳಿಗೆ ಎರಡು ದಿನಕ್ಕೊಮ್ಮೆ ಕೊರೋನಾ ಪರೀಕ್ಷೆ ಕಡ್ಡಾಯ!
ಸದಾ ಮಾಸ್ಕ್, ಗ್ಲೌಸ್ ಧರಿಸುವುದು, ಯಾವಾಗಲೂ ಬಿಸಿನೀರು ಕುಡಿಯುವುದು ಸೇರಿದಂತೆ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಎರಡು ದಿನಕ್ಕೊಮ್ಮೆ ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಮುಖ್ಯಮಂತ್ರಿಗಳನ್ನು ಭೇಟಿಯಾಗಬೇಕೆ? ಕೊರೋನಾ ಟೆಸ್ಟ್ ಕಡ್ಡಾಯ!
ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಸೆ.21ರಿಂದ ವಿಧಾನಮಂಡಲ ಅಧಿವೇಶನ ಆರಂಭ: ಕಲಾಪಕ್ಕೆ ಹಾಜರಾಗುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ
ವಿಧಾನಮಂಡಲ ಅಧಿವೇಶನವು ಸೆ.21ರಿಂದ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಪ್ರವೇಶಕ್ಕೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ.

