ಕೊರೋನಾ ಲಸಿಕೆ

ದೇಶದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದವರ ಸಂಖ್ಯೆ 50 ಕೋಟಿ!
ದೇಶಾದ್ಯಂತ ಇಲ್ಲಿಯವರೆಗೆ ಬರೋಬ್ಬರಿ 50 ಕೋಟಿ ಜನರು ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ತಿಳಿಸಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.18 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 2.18 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೊರೋನಾ ವಿರುದ್ಧ ಕೋವಿಶೀಲ್ಡ್ ಶೇ.93ರಷ್ಟು ರಕ್ಷಣೆ; ಶೇ.98ರಷ್ಟು ಮರಣ ಕಡಿತ: ಎಎಫ್‌ಎಂಸಿ ಅಧ್ಯಯನ
ಕೋವಿಶೀಲ್ಡ್ ಕೋವಿಡ್ -19 ರ ವಿರುದ್ಧ ಶೇಖಡ 93ರಷ್ಟು ರಕ್ಷಣೆ ನೀಡುತ್ತದೆ. ಅಲ್ಲದೆ ಶೇ 98 ರಷ್ಟು ಮರಣ ಪ್ರಮಾಣ ಕಡಿತವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.70 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.70 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು: ಕೇಂದ್ರ ಸರ್ಕಾರ
ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು ಎಂದು ಎನ್ ಟಿಎಜಿ ಹೇಳಿದೆ.

'ಕೋವಾಕ್ಸ್' ಅಭಿಯಾನದಡಿ ಅಮೆರಿಕಾ ಜಾಗತಿಕವಾಗಿ ಹಂಚಲಿರುವ 8 ಕೋಟಿ ಲಸಿಕೆ ಪೈಕಿ ಭಾರತಕ್ಕೂ ಪಾಲು!
ವಿಶ್ವಸಂಸ್ಥೆಯ ಕೋವಾಕ್ಸ್ ಜಾಗತಿಕ ಲಸಿಕೆ ಹಂಚಿಕೆ ಅಭಿಯಾನದ ಅಡಿಯಲ್ಲಿ ಬಳಕೆಯಾಗದೆ ದಾಸ್ತಾನು ಮಾಡಲಾಗಿರುವ 80 ಮಿಲಿಯನ್ ಅಮೆರಿಕಾ ಬೆಂಬಲಿತ ಲಸಿಕೆಗಳ ಹಂಚಿಕೆ ಪೈಕಿ ಭಾರತ ಸಹ ತನ್ನ ಪಾಲನ್ನು ಪಡೆಯಲಿದೆ ಎಂದು ಬೈಡನ್ ಸರ್ಕಾರದ ರಾಜ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್-19: ವಿದೇಶಿ ಲಸಿಕೆಗಳಿಗೆ ಅನುಮತಿ ಪ್ರಕ್ರಿಯೆ ಮತ್ತಷ್ಟು ಸಡಿಲಗೊಳಿಸಿದ ಡಿಸಿಜಿಐ
ಭಾರತದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದೆ.

ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್
ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಜನರ ಲಸಿಕೆ ಕಾರ್ಯಕರ್ತರಿಗೆ: ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ!
ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಡ್ ಬ್ಲಾಕಿಂಗ್, ವ್ಯಾಕ್ಸಿನ್ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧವೂ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದೆ.

