ದೇಶಕೋವಿಡ್-19 ಲಸಿಕೆ ಅಭಿವೃದ್ಧಿ: ಝೈಡಸ್ ಬಯೋಟೆಕ್ ಪಾರ್ಕ್'ಗೆ ತೆರಳಿದ ಪ್ರಧಾನಿ ಮೋದಿ, ವಿಜ್ಞಾನಿಗಳೊಂದಿಗೆ ಸಮಾಲೋಚನೆ
ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಖುದ್ದು ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನಿ ಮೋದಿಯವರು ಶನಿವಾರ ಅಹಮದಾಬಾದ್'ಗೆ ಭೇಟಿ ನೀಡಿದ್ದು, ಇಲ್ಲಿಂದ 20 ಕಿಮೀ ದೂರದಲ್ಲಿರುವ ಝೈಡಸ್ ಬಯೋಟೆಕ್ ಪಾರ್ಕ್'ಗೆ ತೆರಳಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.