ಕೋಡಿಹಳ್ಳಿ ಚಂದ್ರಶೇಖರ್

2013ರ ಪ್ರಕರಣಕ್ಕೆ ಮರು ಜೀವ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
ಈ ಪ್ರಕರಣಕ್ಕೆ ಸಂಬಂಧಿಸಿ ವಾರೆಂಟ್ ಮೇಲೆ ಹುಬ್ಬಳ್ಳಿ ರೈಲ್ವೆ ಪೊಲೀಸರು ಶಿರಸಿ ಪೊಲೀಸರ ಸಹಕಾರ ಪಡೆದು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಇಂದು ಬಂಧಿಸಿದ್ದಾರೆ.

ನಿಮಗೆ ಗೂಂಡಾ, ಲಫಂಗರ ಸರ್ಕಾರ ಬೇಕೆ ಅಥವಾ ಪ್ರಾಮಾಣಿಕ ಆಡಳಿತ ಬೇಕೆ?: ಕನ್ನಡಿಗರಿಗೆ ಕೇಜ್ರಿವಾಲ್ ಪ್ರಶ್ನೆ
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಡಾ.ಶಿವರಾಮ ಕಾರಂತ ಲೇಔಟ್ ಸಮಸ್ಯೆಗಳನ್ನು ಬಗೆಹರಿಸಲು ನೇಮಕ ಮಾಡಿದ ಸಮಿತಿಗೆ ಅಡ್ಡಿಪಡಿಸಿದ್ದಕ್ಕಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಸುಪ್ರೀಂ ಕೋರ್ಟ್ ಬುಧವಾರ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ.

ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಸೇರಿ 17 ಮಂದಿ ವಿರುದ್ಧ ಎಫ್ಐಆರ್, 200 ಸಿಬ್ಬಂದಿ ವಜಾ
ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಕರ್ ಸೇರಿದಂತೆ 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ತಟ್ಟೆ, ಲೋಟ ಬಡಿಯುವ ಮೂಲಕ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್
ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಆರೋಪ: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ
ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ

6ನೇ ವೇತನ ಆಯೋಗವನ್ನು ಜಾರಿಗೊಳಿಸದಿರಲು ವೈಜ್ಞಾನಿಕ ಕಾರಣ ನೀಡಿ: ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಸರ್ಕಾರದ ಬೆದರಿಕೆ ತಂತ್ರಗಳಿಗೆ ಹೆದರುವುದಿಲ್ಲ, ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್
ಸಾರಿಗೆ ನೌಕರರ ಮುಷ್ಕರ ಮೂರನೇ ದಿನ ಮುಂದುವರಿಯುತ್ತಿದ್ದು ಇಲಾಖೆ ನೌಕರರ ಭವಿಷ್ಯ, ಜೀವನದ ಅನೇಕ ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ನೌಕರರ ಜೀವನ ಸುಧಾರಣೆಗೆ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸಬಾರದು ಎಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಕೋಡಿಹಳ್ಳಿ ಆಸ್ತಿ ತನಿಖೆಗೆ ರೇಣುಕಾಚಾರ್ಯ ಆಗ್ರಹ
ರೈತರ ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾರೀ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದು, ಕೂಡಲೇ ಸರ್ಕಾರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

