ರಾಜ್ಯಕಾಂಗ್ರೆಸ್ ಮುಖಂಡ, ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹತ್ಯೆ ಪ್ರಕರಣ: ಆರು ಮಂದಿ ಬಂಧನ
ಕಾಂಗ್ರೆಸ್ ಮುಖಂಡ, ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಪೊಲೀಸರು ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಬಳಿ ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.