ಕೋವಿಡ್-19 ಪ್ರಕರಣ

ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಬಣ್ಣಕ್ಕೆ ತಿರುಗಿದ ಅಕ್ರಮ ಬೆಡ್ ಬುಕ್ಕಿಂಗ್ ಹಗರಣ: ಹಲವು ಆಯಾಮಗಳಲ್ಲಿ ತನಿಖೆ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಕೆಲ ಬಿಜೆಪಿ ನಾಯಕರು ಬಹಿರಂಗಪಡಿಸಿರುವ ಬೆಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೋನ ಹೆಚ್ಚಳ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಜಾಸ್ತಿ: ವೀರೇಂದ್ರ ಹೆಗ್ಗಡೆ ಸ್ಪಷ್ಟೀಕರಣ
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿದೆ ಎಂಬ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು ಹೆಗ್ಗಡೆ ಅವರ ಪರವಾಗಿ ವಾದಿಸುತ್ತಿದ್ದರೆ, ಮತ್ತೆ ಕೆಲವರು ವಿರುದ್ಧವಾಗಿ ವಾದಿಸುತ್ತಿದ್ದಾರೆ.

ಮುಂಬೈ: ಒಂದೇ ದಿನದಲ್ಲಿ 998 ಕೋವಿಡ್-19 ಪ್ರಕರಣಗಳು, ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆ
ಮುಂಬೈ ನಲ್ಲಿ ಒಂದೇ ದಿನ 998 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆಯಾಗಿದೆ ಎಂದು ಬೃಹತ್ ಮುಂಬೈ ನಗರಪಾಲಿಕೆ ಹೇಳಿದೆ.

ಕೋವಿಡ್ -19: ಧಾರಾವಿಯಲ್ಲಿ ಎರಡನೇ ಪ್ರಕರಣ ಪತ್ತೆ, ಪೌರ ಕಾರ್ಮಿಕನಿಗೆ ಸೋಂಕು
ಏಷ್ಯಾದ ಅತಿದೊಡ್ಡ ಕೊಳಚೆ ಪ್ರದೇಶ ಮುಂಬೈಯ ಧಾರಾವಿಯಲ್ಲಿ ಎರಡನೇ ಕೊರೋನಾ ಸೋಂಕು ಪ್ರಕರಣ ಕಂಡುಬಂದಿದೆ. 52 ವರ್ಷದ ಪೌರ ಕಾರ್ಮಿಕರೊಬ್ಬರಲ್ಲಿ ಈ ಸೋಂಕು ದೃಢಪಟ್ಟಿದೆ. ವೊಲ್ರಿ ಪ್ರದೇಶದಲ್ಲಿ ವಾಸವಾಗಿದ್ದ ಈತನನ್ನು ಧಾರಾವಿಯಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ನೇಮಿಸಲಾಗಿತ್ತು ಎಂದು ಬಿಎಂಸಿ ಹೇಳಿದೆ.

