ಕೋವಿಡ್-19 ಪ್ರಕರಣಗಳು

ಮತ್ತೆ ಕೊರೊನಾ ಆತಂಕ; ರಾಜ್ಯದಲ್ಲಿ 8 ಸೇರಿ ದೇಶಾದ್ಯಂತ 257 ಪ್ರಕರಣ ಪತ್ತೆ
ರಾಜ್ಯದಲ್ಲಿ ಹೊಸದಾಗಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

200 ದಿನಗಳ ಬಳಿಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ: 19 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,158 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು 19 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೋವಿಡ್ ಸೋಂಕು ಶೇ.38 ರಷ್ಟು ಏರಿಕೆ; 10-12 ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ
ಭಾರತದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 7,830 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಶೇ.38 ರಷ್ಟು ಹೆಚ್ಚಳ ಕಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಂತರ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ.

ತಮಿಳುನಾಡಿಗೆ ಚೀನಾದಿಂದ ಆಗಮಿಸಿದ ತಾಯಿ ಮಗುವಿಗೆ ಕೋವಿಡ್ ಸೋಂಕು ದೃಢ
ಚೀನಾದಿಂದ ತಮಿಳುನಾಡಿಗೆ ಆಗಮಿಸಿದ ತಾಯಿ ಮಗುವಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಚೀನಾದಲ್ಲಿ 20 ದಿನಗಳಲ್ಲಿ 250 ಮಿಲಿಯನ್ ಕೋವಿಡ್ ಪ್ರಕರಣಗಳು ವರದಿ
ಕೋವಿಡ್ ಸೋಂಕಿನಿಂದ ಮತ್ತೆ ಚೀನಾ ತತ್ತರಿಸಿದ್ದು ಕೇವಲ 20 ದಿನಗಳಲ್ಲಿ 250 ಮಿಲಿಯನ್ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ; ಒಂದೇ ದಿನದಲ್ಲಿ ಕೋವಿಡ್ ಕೇಸ್ ದಾಖಲೆಯ ಏರಿಕೆ, ಲಾಕ್ ಡೌನ್ ವಿಸ್ತರಣೆ
ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ ಉಂಟಾಗಿದ್ದು, ಒಂದೇ ದಿನದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಾಖಲೆಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

ರಾಜ್ಯದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ದಂಡ? ಈ ಬಗ್ಗೆ ಆರೋಗ್ಯ ಆಯುಕ್ತರು ನೀಡಿದ ಮಾಹಿತಿ ಇಲ್ಲಿದೆ...
ಕೋವಿಡ್ ಪ್ರಕರಣಗಳು, ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೊದಲ ಹೆಜ್ಜೆಯಾಗಿ, ಆರೋಗ್ಯ ಸೌಧ ಮತ್ತು ಅದರ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲು ಆರೋಗ್ಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ.

ಪ್ರಸಕ್ತ ಓಮಿಕ್ರಾನ್ ತಳಿಗಳು ಶೇ.20-30 ರಷ್ಟು ಹೆಚ್ಚು ಸೋಂಕು ಹರಡಿಸಲು ಸಮರ್ಥ: ಎನ್ ಟಿಎಜಿಐ ವೈದ್ಯ ಎನ್ ಕೆ ಅರೋರ
ರಾಷ್ಟ್ರ ರಾಜಧಾನಿ ಹಾಗೂ ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಸಂಖ್ಯೆ ಹೆಚ್ಚಳದ ನಡುವೆ ಕೋವಿಡ್-19 ರೂಪಾಂತರಗಳ ವಂಶವಾಹಿ ಸಂರಚನೆ ವಿಶ್ಲೇಷಣೆ (ಜಿನೋಮ್ ಸೀಕ್ವೆನ್ಸಿಂಗ್) ಯನ್ನು ಆ.08 ರಂದು ನಡೆಸಲಿದೆ.

ದೆಹಲಿಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ರೀತಿಯ ಏರಿಕೆ ಹಿನ್ನೆಲೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.

