ರಾಜ್ಯಡೆಲ್ಟಾ ಪ್ಲಸ್ ಆತಂಕ: ಮಹಾರಾಷ್ಟ್ರದಿಂದ ಬರುವವರಿಗೆ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಲಸಿಕೆ ಪ್ರಮಾಣಪತ್ರ ಕಡ್ಡಾಯ!
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ವೈರಾಣುವಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 72 ಗಂಟೆಯೊಳಗಿನ ಆರ್'ಟಿ-ಪಿಸಿಆರ್ ವರದಿ ಅಥವಾ 1 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.