ರಾಜ್ಯಕೋವಿಡ್ ಪರಿಹಾರನಿಧಿಗೆ ಸಚಿವರ 1 ವರ್ಷದ ವೇತನ ಹಾಗೂ ಶಾಸಕರ 1 ತಿಂಗಳ ವೇತನ ನೀಡಲು ಸಿಎಂ ಸಲಹೆ
ರಾಜ್ಯದಲ್ಲಿ ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.